ಪ್ರಸಂಗಿ 1 : 1 (KNV)
ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
ಪ್ರಸಂಗಿ 1 : 2 (KNV)
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
ಪ್ರಸಂಗಿ 1 : 3 (KNV)
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಪ್ರಸಂಗಿ 1 : 4 (KNV)
ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
ಪ್ರಸಂಗಿ 1 : 5 (KNV)
ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
ಪ್ರಸಂಗಿ 1 : 6 (KNV)
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
ಪ್ರಸಂಗಿ 1 : 7 (KNV)
ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
ಪ್ರಸಂಗಿ 1 : 8 (KNV)
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
ಪ್ರಸಂಗಿ 1 : 9 (KNV)
ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
ಪ್ರಸಂಗಿ 1 : 10 (KNV)
ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
ಪ್ರಸಂಗಿ 1 : 11 (KNV)
ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
ಪ್ರಸಂಗಿ 1 : 12 (KNV)
ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
ಪ್ರಸಂಗಿ 1 : 13 (KNV)
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
ಪ್ರಸಂಗಿ 1 : 14 (KNV)
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ಪ್ರಸಂಗಿ 1 : 15 (KNV)
ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
ಪ್ರಸಂಗಿ 1 : 16 (KNV)
ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
ಪ್ರಸಂಗಿ 1 : 17 (KNV)
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.
ಪ್ರಸಂಗಿ 1 : 18 (KNV)
ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

1 2 3 4 5 6 7 8 9 10 11 12 13 14 15 16 17 18