ಎಫೆಸದವರಿಗೆ 3 : 1 (KNV)
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಎಫೆಸದವರಿಗೆ 3 : 2 (KNV)
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
ಎಫೆಸದವರಿಗೆ 3 : 3 (KNV)
ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
ಎಫೆಸದವರಿಗೆ 3 : 4 (KNV)
(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
ಎಫೆಸದವರಿಗೆ 3 : 5 (KNV)
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಎಫೆಸದವರಿಗೆ 3 : 6 (KNV)
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ಎಫೆಸದವರಿಗೆ 3 : 7 (KNV)
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಎಫೆಸದವರಿಗೆ 3 : 8 (KNV)
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಎಫೆಸದವರಿಗೆ 3 : 9 (KNV)
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
ಎಫೆಸದವರಿಗೆ 3 : 10 (KNV)
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಎಫೆಸದವರಿಗೆ 3 : 11 (KNV)
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ಎಫೆಸದವರಿಗೆ 3 : 12 (KNV)
ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
ಎಫೆಸದವರಿಗೆ 3 : 13 (KNV)
ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
ಎಫೆಸದವರಿಗೆ 3 : 14 (KNV)
ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
ಎಫೆಸದವರಿಗೆ 3 : 15 (KNV)
ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
ಎಫೆಸದವರಿಗೆ 3 : 16 (KNV)
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
ಎಫೆಸದವರಿಗೆ 3 : 17 (KNV)
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಎಫೆಸದವರಿಗೆ 3 : 18 (KNV)
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ಎಫೆಸದವರಿಗೆ 3 : 19 (KNV)
ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ಎಫೆಸದವರಿಗೆ 3 : 20 (KNV)
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
ಎಫೆಸದವರಿಗೆ 3 : 21 (KNV)
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21