ಎಫೆಸದವರಿಗೆ 4 : 1 (KNV)
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಎಫೆಸದವರಿಗೆ 4 : 2 (KNV)
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ಎಫೆಸದವರಿಗೆ 4 : 3 (KNV)
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ಎಫೆಸದವರಿಗೆ 4 : 4 (KNV)
ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
ಎಫೆಸದವರಿಗೆ 4 : 5 (KNV)
ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
ಎಫೆಸದವರಿಗೆ 4 : 6 (KNV)
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
ಎಫೆಸದವರಿಗೆ 4 : 7 (KNV)
ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
ಎಫೆಸದವರಿಗೆ 4 : 8 (KNV)
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಎಫೆಸದವರಿಗೆ 4 : 9 (KNV)
(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
ಎಫೆಸದವರಿಗೆ 4 : 10 (KNV)
ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
ಎಫೆಸದವರಿಗೆ 4 : 11 (KNV)
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಎಫೆಸದವರಿಗೆ 4 : 12 (KNV)
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
ಎಫೆಸದವರಿಗೆ 4 : 13 (KNV)
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ಎಫೆಸದವರಿಗೆ 4 : 14 (KNV)
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಎಫೆಸದವರಿಗೆ 4 : 15 (KNV)
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಎಫೆಸದವರಿಗೆ 4 : 16 (KNV)
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
ಎಫೆಸದವರಿಗೆ 4 : 17 (KNV)
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಎಫೆಸದವರಿಗೆ 4 : 18 (KNV)
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ಎಫೆಸದವರಿಗೆ 4 : 19 (KNV)
ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
ಎಫೆಸದವರಿಗೆ 4 : 20 (KNV)
ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
ಎಫೆಸದವರಿಗೆ 4 : 21 (KNV)
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ಎಫೆಸದವರಿಗೆ 4 : 22 (KNV)
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಎಫೆಸದವರಿಗೆ 4 : 23 (KNV)
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
ಎಫೆಸದವರಿಗೆ 4 : 24 (KNV)
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
ಎಫೆಸದವರಿಗೆ 4 : 25 (KNV)
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಎಫೆಸದವರಿಗೆ 4 : 26 (KNV)
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
ಎಫೆಸದವರಿಗೆ 4 : 27 (KNV)
ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
ಎಫೆಸದವರಿಗೆ 4 : 28 (KNV)
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ಎಫೆಸದವರಿಗೆ 4 : 29 (KNV)
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಎಫೆಸದವರಿಗೆ 4 : 30 (KNV)
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಎಫೆಸದವರಿಗೆ 4 : 31 (KNV)
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಎಫೆಸದವರಿಗೆ 4 : 32 (KNV)
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: