ಎಫೆಸದವರಿಗೆ 5 : 1 (KNV)
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
ಎಫೆಸದವರಿಗೆ 5 : 2 (KNV)
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 3 (KNV)
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಎಫೆಸದವರಿಗೆ 5 : 4 (KNV)
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ಎಫೆಸದವರಿಗೆ 5 : 5 (KNV)
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಎಫೆಸದವರಿಗೆ 5 : 6 (KNV)
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಎಫೆಸದವರಿಗೆ 5 : 7 (KNV)
ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
ಎಫೆಸದವರಿಗೆ 5 : 8 (KNV)
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 9 (KNV)
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಎಫೆಸದವರಿಗೆ 5 : 10 (KNV)
ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
ಎಫೆಸದವರಿಗೆ 5 : 11 (KNV)
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಎಫೆಸದವರಿಗೆ 5 : 12 (KNV)
ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
ಎಫೆಸದವರಿಗೆ 5 : 13 (KNV)
ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
ಎಫೆಸದವರಿಗೆ 5 : 14 (KNV)
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ಎಫೆಸದವರಿಗೆ 5 : 15 (KNV)
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಎಫೆಸದವರಿಗೆ 5 : 16 (KNV)
ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
ಎಫೆಸದವರಿಗೆ 5 : 17 (KNV)
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
ಎಫೆಸದವರಿಗೆ 5 : 18 (KNV)
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಎಫೆಸದವರಿಗೆ 5 : 19 (KNV)
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
ಎಫೆಸದವರಿಗೆ 5 : 20 (KNV)
ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ಎಫೆಸದವರಿಗೆ 5 : 21 (KNV)
ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 22 (KNV)
ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಎಫೆಸದವರಿಗೆ 5 : 23 (KNV)
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
ಎಫೆಸದವರಿಗೆ 5 : 24 (KNV)
ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
ಎಫೆಸದವರಿಗೆ 5 : 25 (KNV)
ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಎಫೆಸದವರಿಗೆ 5 : 26 (KNV)
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಎಫೆಸದವರಿಗೆ 5 : 27 (KNV)
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ಎಫೆಸದವರಿಗೆ 5 : 28 (KNV)
ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
ಎಫೆಸದವರಿಗೆ 5 : 29 (KNV)
ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
ಎಫೆಸದವರಿಗೆ 5 : 30 (KNV)
ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
ಎಫೆಸದವರಿಗೆ 5 : 31 (KNV)
ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
ಎಫೆಸದವರಿಗೆ 5 : 32 (KNV)
ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.
ಎಫೆಸದವರಿಗೆ 5 : 33 (KNV)
ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33