ಎಫೆಸದವರಿಗೆ 6 : 1 (KNV)
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
ಎಫೆಸದವರಿಗೆ 6 : 2 (KNV)
ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
ಎಫೆಸದವರಿಗೆ 6 : 3 (KNV)
ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
ಎಫೆಸದವರಿಗೆ 6 : 4 (KNV)
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
ಎಫೆಸದವರಿಗೆ 6 : 5 (KNV)
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ಎಫೆಸದವರಿಗೆ 6 : 6 (KNV)
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಎಫೆಸದವರಿಗೆ 6 : 7 (KNV)
ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
ಎಫೆಸದವರಿಗೆ 6 : 8 (KNV)
ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
ಎಫೆಸದವರಿಗೆ 6 : 9 (KNV)
ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
ಎಫೆಸದವರಿಗೆ 6 : 10 (KNV)
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಎಫೆಸದವರಿಗೆ 6 : 11 (KNV)
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ಎಫೆಸದವರಿಗೆ 6 : 12 (KNV)
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ಎಫೆಸದವರಿಗೆ 6 : 13 (KNV)
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ಎಫೆಸದವರಿಗೆ 6 : 14 (KNV)
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ಎಫೆಸದವರಿಗೆ 6 : 15 (KNV)
ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ಎಫೆಸದವರಿಗೆ 6 : 16 (KNV)
ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
ಎಫೆಸದವರಿಗೆ 6 : 17 (KNV)
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
ಎಫೆಸದವರಿಗೆ 6 : 18 (KNV)
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಎಫೆಸದವರಿಗೆ 6 : 19 (KNV)
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಎಫೆಸದವರಿಗೆ 6 : 20 (KNV)
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
ಎಫೆಸದವರಿಗೆ 6 : 21 (KNV)
ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
ಎಫೆಸದವರಿಗೆ 6 : 22 (KNV)
ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
ಎಫೆಸದವರಿಗೆ 6 : 23 (KNV)
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.
ಎಫೆಸದವರಿಗೆ 6 : 24 (KNV)
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24