ಎಸ್ತೇರಳು 5 : 1 (KNV)
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ಎಸ್ತೇರಳು 5 : 2 (KNV)
ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
ಎಸ್ತೇರಳು 5 : 3 (KNV)
ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
ಎಸ್ತೇರಳು 5 : 4 (KNV)
ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
ಎಸ್ತೇರಳು 5 : 5 (KNV)
ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
ಎಸ್ತೇರಳು 5 : 6 (KNV)
ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
ಎಸ್ತೇರಳು 5 : 7 (KNV)
ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
ಎಸ್ತೇರಳು 5 : 8 (KNV)
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
ಎಸ್ತೇರಳು 5 : 9 (KNV)
ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
ಎಸ್ತೇರಳು 5 : 10 (KNV)
ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
ಎಸ್ತೇರಳು 5 : 11 (KNV)
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಎಸ್ತೇರಳು 5 : 12 (KNV)
ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
ಎಸ್ತೇರಳು 5 : 13 (KNV)
ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಎಸ್ತೇರಳು 5 : 14 (KNV)
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

1 2 3 4 5 6 7 8 9 10 11 12 13 14

BG:

Opacity:

Color:


Size:


Font: