ವಿಮೋಚನಕಾಂಡ 23 : 1 (KNV)
ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ವಿಮೋಚನಕಾಂಡ 23 : 2 (KNV)
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ವಿಮೋಚನಕಾಂಡ 23 : 3 (KNV)
ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
ವಿಮೋಚನಕಾಂಡ 23 : 4 (KNV)
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
ವಿಮೋಚನಕಾಂಡ 23 : 5 (KNV)
ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
ವಿಮೋಚನಕಾಂಡ 23 : 6 (KNV)
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ವಿಮೋಚನಕಾಂಡ 23 : 7 (KNV)
ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
ವಿಮೋಚನಕಾಂಡ 23 : 8 (KNV)
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ವಿಮೋಚನಕಾಂಡ 23 : 9 (KNV)
ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
ವಿಮೋಚನಕಾಂಡ 23 : 10 (KNV)
ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
ವಿಮೋಚನಕಾಂಡ 23 : 11 (KNV)
ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
ವಿಮೋಚನಕಾಂಡ 23 : 12 (KNV)
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ವಿಮೋಚನಕಾಂಡ 23 : 13 (KNV)
ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
ವಿಮೋಚನಕಾಂಡ 23 : 14 (KNV)
ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
ವಿಮೋಚನಕಾಂಡ 23 : 15 (KNV)
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
ವಿಮೋಚನಕಾಂಡ 23 : 16 (KNV)
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ವಿಮೋಚನಕಾಂಡ 23 : 17 (KNV)
ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
ವಿಮೋಚನಕಾಂಡ 23 : 18 (KNV)
ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
ವಿಮೋಚನಕಾಂಡ 23 : 19 (KNV)
ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ವಿಮೋಚನಕಾಂಡ 23 : 20 (KNV)
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ವಿಮೋಚನಕಾಂಡ 23 : 21 (KNV)
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ವಿಮೋಚನಕಾಂಡ 23 : 22 (KNV)
ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
ವಿಮೋಚನಕಾಂಡ 23 : 23 (KNV)
ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ವಿಮೋಚನಕಾಂಡ 23 : 24 (KNV)
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ವಿಮೋಚನಕಾಂಡ 23 : 25 (KNV)
ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
ವಿಮೋಚನಕಾಂಡ 23 : 26 (KNV)
ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
ವಿಮೋಚನಕಾಂಡ 23 : 27 (KNV)
ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
ವಿಮೋಚನಕಾಂಡ 23 : 28 (KNV)
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ವಿಮೋಚನಕಾಂಡ 23 : 29 (KNV)
ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
ವಿಮೋಚನಕಾಂಡ 23 : 30 (KNV)
ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
ವಿಮೋಚನಕಾಂಡ 23 : 31 (KNV)
ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
ವಿಮೋಚನಕಾಂಡ 23 : 32 (KNV)
ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.
ವಿಮೋಚನಕಾಂಡ 23 : 33 (KNV)
ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
❮
❯