ವಿಮೋಚನಕಾಂಡ 37 : 1 (KNV)
ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
ವಿಮೋಚನಕಾಂಡ 37 : 2 (KNV)
ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ವಿಮೋಚನಕಾಂಡ 37 : 3 (KNV)
ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
ವಿಮೋಚನಕಾಂಡ 37 : 4 (KNV)
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
ವಿಮೋಚನಕಾಂಡ 37 : 5 (KNV)
ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
ವಿಮೋಚನಕಾಂಡ 37 : 6 (KNV)
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
ವಿಮೋಚನಕಾಂಡ 37 : 7 (KNV)
ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
ವಿಮೋಚನಕಾಂಡ 37 : 8 (KNV)
ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
ವಿಮೋಚನಕಾಂಡ 37 : 9 (KNV)
ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
ವಿಮೋಚನಕಾಂಡ 37 : 10 (KNV)
ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
ವಿಮೋಚನಕಾಂಡ 37 : 11 (KNV)
ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
ವಿಮೋಚನಕಾಂಡ 37 : 12 (KNV)
ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ವಿಮೋಚನಕಾಂಡ 37 : 13 (KNV)
ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
ವಿಮೋಚನಕಾಂಡ 37 : 14 (KNV)
ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
ವಿಮೋಚನಕಾಂಡ 37 : 15 (KNV)
ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
ವಿಮೋಚನಕಾಂಡ 37 : 16 (KNV)
ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
ವಿಮೋಚನಕಾಂಡ 37 : 17 (KNV)
ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
ವಿಮೋಚನಕಾಂಡ 37 : 18 (KNV)
ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
ವಿಮೋಚನಕಾಂಡ 37 : 19 (KNV)
ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
ವಿಮೋಚನಕಾಂಡ 37 : 20 (KNV)
ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
ವಿಮೋಚನಕಾಂಡ 37 : 21 (KNV)
ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
ವಿಮೋಚನಕಾಂಡ 37 : 22 (KNV)
ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
ವಿಮೋಚನಕಾಂಡ 37 : 23 (KNV)
ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
ವಿಮೋಚನಕಾಂಡ 37 : 24 (KNV)
ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
ವಿಮೋಚನಕಾಂಡ 37 : 25 (KNV)
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
ವಿಮೋಚನಕಾಂಡ 37 : 26 (KNV)
ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
ವಿಮೋಚನಕಾಂಡ 37 : 27 (KNV)
ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
ವಿಮೋಚನಕಾಂಡ 37 : 28 (KNV)
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
ವಿಮೋಚನಕಾಂಡ 37 : 29 (KNV)
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: