ವಿಮೋಚನಕಾಂಡ 40 : 1 (KNV)
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
ವಿಮೋಚನಕಾಂಡ 40 : 2 (KNV)
ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
ವಿಮೋಚನಕಾಂಡ 40 : 3 (KNV)
ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
ವಿಮೋಚನಕಾಂಡ 40 : 4 (KNV)
ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
ವಿಮೋಚನಕಾಂಡ 40 : 5 (KNV)
ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
ವಿಮೋಚನಕಾಂಡ 40 : 6 (KNV)
ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
ವಿಮೋಚನಕಾಂಡ 40 : 7 (KNV)
ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
ವಿಮೋಚನಕಾಂಡ 40 : 8 (KNV)
ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
ವಿಮೋಚನಕಾಂಡ 40 : 9 (KNV)
ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
ವಿಮೋಚನಕಾಂಡ 40 : 10 (KNV)
ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
ವಿಮೋಚನಕಾಂಡ 40 : 11 (KNV)
ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
ವಿಮೋಚನಕಾಂಡ 40 : 12 (KNV)
ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
ವಿಮೋಚನಕಾಂಡ 40 : 13 (KNV)
ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
ವಿಮೋಚನಕಾಂಡ 40 : 14 (KNV)
ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
ವಿಮೋಚನಕಾಂಡ 40 : 15 (KNV)
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
ವಿಮೋಚನಕಾಂಡ 40 : 16 (KNV)
ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
ವಿಮೋಚನಕಾಂಡ 40 : 17 (KNV)
ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
ವಿಮೋಚನಕಾಂಡ 40 : 18 (KNV)
ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
ವಿಮೋಚನಕಾಂಡ 40 : 19 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
ವಿಮೋಚನಕಾಂಡ 40 : 20 (KNV)
ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
ವಿಮೋಚನಕಾಂಡ 40 : 21 (KNV)
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
ವಿಮೋಚನಕಾಂಡ 40 : 22 (KNV)
ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
ವಿಮೋಚನಕಾಂಡ 40 : 23 (KNV)
ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
ವಿಮೋಚನಕಾಂಡ 40 : 24 (KNV)
ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
ವಿಮೋಚನಕಾಂಡ 40 : 25 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
ವಿಮೋಚನಕಾಂಡ 40 : 26 (KNV)
ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
ವಿಮೋಚನಕಾಂಡ 40 : 27 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
ವಿಮೋಚನಕಾಂಡ 40 : 28 (KNV)
ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
ವಿಮೋಚನಕಾಂಡ 40 : 29 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
ವಿಮೋಚನಕಾಂಡ 40 : 30 (KNV)
ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
ವಿಮೋಚನಕಾಂಡ 40 : 31 (KNV)
ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
ವಿಮೋಚನಕಾಂಡ 40 : 32 (KNV)
ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
ವಿಮೋಚನಕಾಂಡ 40 : 33 (KNV)
ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
ವಿಮೋಚನಕಾಂಡ 40 : 34 (KNV)
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ವಿಮೋಚನಕಾಂಡ 40 : 35 (KNV)
ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
ವಿಮೋಚನಕಾಂಡ 40 : 36 (KNV)
ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
ವಿಮೋಚನಕಾಂಡ 40 : 37 (KNV)
ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,
ವಿಮೋಚನಕಾಂಡ 40 : 38 (KNV)
ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: