ವಿಮೋಚನಕಾಂಡ 6 : 1 (KNV)
ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
ವಿಮೋಚನಕಾಂಡ 6 : 2 (KNV)
ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
ವಿಮೋಚನಕಾಂಡ 6 : 3 (KNV)
ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
ವಿಮೋಚನಕಾಂಡ 6 : 4 (KNV)
ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
ವಿಮೋಚನಕಾಂಡ 6 : 5 (KNV)
ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
ವಿಮೋಚನಕಾಂಡ 6 : 6 (KNV)
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ವಿಮೋಚನಕಾಂಡ 6 : 7 (KNV)
ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
ವಿಮೋಚನಕಾಂಡ 6 : 8 (KNV)
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ವಿಮೋಚನಕಾಂಡ 6 : 9 (KNV)
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
ವಿಮೋಚನಕಾಂಡ 6 : 10 (KNV)
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
ವಿಮೋಚನಕಾಂಡ 6 : 11 (KNV)
ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
ವಿಮೋಚನಕಾಂಡ 6 : 12 (KNV)
ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
ವಿಮೋಚನಕಾಂಡ 6 : 13 (KNV)
ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
ವಿಮೋಚನಕಾಂಡ 6 : 14 (KNV)
ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
ವಿಮೋಚನಕಾಂಡ 6 : 15 (KNV)
ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
ವಿಮೋಚನಕಾಂಡ 6 : 16 (KNV)
ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
ವಿಮೋಚನಕಾಂಡ 6 : 17 (KNV)
ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.
ವಿಮೋಚನಕಾಂಡ 6 : 18 (KNV)
ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
ವಿಮೋಚನಕಾಂಡ 6 : 19 (KNV)
ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
ವಿಮೋಚನಕಾಂಡ 6 : 20 (KNV)
ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
ವಿಮೋಚನಕಾಂಡ 6 : 21 (KNV)
ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
ವಿಮೋಚನಕಾಂಡ 6 : 22 (KNV)
ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
ವಿಮೋಚನಕಾಂಡ 6 : 23 (KNV)
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
ವಿಮೋಚನಕಾಂಡ 6 : 24 (KNV)
ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
ವಿಮೋಚನಕಾಂಡ 6 : 25 (KNV)
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
ವಿಮೋಚನಕಾಂಡ 6 : 26 (KNV)
ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
ವಿಮೋಚನಕಾಂಡ 6 : 27 (KNV)
ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
ವಿಮೋಚನಕಾಂಡ 6 : 28 (KNV)
ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
ವಿಮೋಚನಕಾಂಡ 6 : 29 (KNV)
ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.
ವಿಮೋಚನಕಾಂಡ 6 : 30 (KNV)
ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30