ವಿಮೋಚನಕಾಂಡ 8 : 1 (KNV)
ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
ವಿಮೋಚನಕಾಂಡ 8 : 2 (KNV)
ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
ವಿಮೋಚನಕಾಂಡ 8 : 3 (KNV)
ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
ವಿಮೋಚನಕಾಂಡ 8 : 4 (KNV)
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
ವಿಮೋಚನಕಾಂಡ 8 : 5 (KNV)
ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.
ವಿಮೋಚನಕಾಂಡ 8 : 6 (KNV)
ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
ವಿಮೋಚನಕಾಂಡ 8 : 7 (KNV)
ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
ವಿಮೋಚನಕಾಂಡ 8 : 8 (KNV)
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ವಿಮೋಚನಕಾಂಡ 8 : 9 (KNV)
ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
ವಿಮೋಚನಕಾಂಡ 8 : 10 (KNV)
ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
ವಿಮೋಚನಕಾಂಡ 8 : 11 (KNV)
ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
ವಿಮೋಚನಕಾಂಡ 8 : 12 (KNV)
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
ವಿಮೋಚನಕಾಂಡ 8 : 13 (KNV)
ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
ವಿಮೋಚನಕಾಂಡ 8 : 14 (KNV)
ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
ವಿಮೋಚನಕಾಂಡ 8 : 15 (KNV)
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
ವಿಮೋಚನಕಾಂಡ 8 : 16 (KNV)
ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
ವಿಮೋಚನಕಾಂಡ 8 : 17 (KNV)
ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
ವಿಮೋಚನಕಾಂಡ 8 : 18 (KNV)
ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
ವಿಮೋಚನಕಾಂಡ 8 : 19 (KNV)
ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
ವಿಮೋಚನಕಾಂಡ 8 : 20 (KNV)
ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
ವಿಮೋಚನಕಾಂಡ 8 : 21 (KNV)
ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
ವಿಮೋಚನಕಾಂಡ 8 : 22 (KNV)
ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
ವಿಮೋಚನಕಾಂಡ 8 : 23 (KNV)
ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
ವಿಮೋಚನಕಾಂಡ 8 : 24 (KNV)
ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
ವಿಮೋಚನಕಾಂಡ 8 : 25 (KNV)
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
ವಿಮೋಚನಕಾಂಡ 8 : 26 (KNV)
ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
ವಿಮೋಚನಕಾಂಡ 8 : 27 (KNV)
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ವಿಮೋಚನಕಾಂಡ 8 : 28 (KNV)
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ವಿಮೋಚನಕಾಂಡ 8 : 29 (KNV)
ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
ವಿಮೋಚನಕಾಂಡ 8 : 30 (KNV)
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
ವಿಮೋಚನಕಾಂಡ 8 : 31 (KNV)
ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.
ವಿಮೋಚನಕಾಂಡ 8 : 32 (KNV)
ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32