ಯೆಹೆಜ್ಕೇಲನು 1 : 1 (KNV)
ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ಯೆಹೆಜ್ಕೇಲನು 1 : 2 (KNV)
ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
ಯೆಹೆಜ್ಕೇಲನು 1 : 3 (KNV)
ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
ಯೆಹೆಜ್ಕೇಲನು 1 : 4 (KNV)
ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
ಯೆಹೆಜ್ಕೇಲನು 1 : 5 (KNV)
ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
ಯೆಹೆಜ್ಕೇಲನು 1 : 6 (KNV)
ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
ಯೆಹೆಜ್ಕೇಲನು 1 : 7 (KNV)
ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
ಯೆಹೆಜ್ಕೇಲನು 1 : 8 (KNV)
ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
ಯೆಹೆಜ್ಕೇಲನು 1 : 9 (KNV)
ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
ಯೆಹೆಜ್ಕೇಲನು 1 : 10 (KNV)
ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
ಯೆಹೆಜ್ಕೇಲನು 1 : 11 (KNV)
ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
ಯೆಹೆಜ್ಕೇಲನು 1 : 12 (KNV)
ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
ಯೆಹೆಜ್ಕೇಲನು 1 : 13 (KNV)
ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
ಯೆಹೆಜ್ಕೇಲನು 1 : 14 (KNV)
ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
ಯೆಹೆಜ್ಕೇಲನು 1 : 15 (KNV)
ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
ಯೆಹೆಜ್ಕೇಲನು 1 : 16 (KNV)
ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
ಯೆಹೆಜ್ಕೇಲನು 1 : 17 (KNV)
ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
ಯೆಹೆಜ್ಕೇಲನು 1 : 18 (KNV)
ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
ಯೆಹೆಜ್ಕೇಲನು 1 : 19 (KNV)
ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
ಯೆಹೆಜ್ಕೇಲನು 1 : 20 (KNV)
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
ಯೆಹೆಜ್ಕೇಲನು 1 : 21 (KNV)
ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
ಯೆಹೆಜ್ಕೇಲನು 1 : 22 (KNV)
ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
ಯೆಹೆಜ್ಕೇಲನು 1 : 23 (KNV)
ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
ಯೆಹೆಜ್ಕೇಲನು 1 : 24 (KNV)
ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
ಯೆಹೆಜ್ಕೇಲನು 1 : 25 (KNV)
ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
ಯೆಹೆಜ್ಕೇಲನು 1 : 26 (KNV)
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ಯೆಹೆಜ್ಕೇಲನು 1 : 27 (KNV)
ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.
ಯೆಹೆಜ್ಕೇಲನು 1 : 28 (KNV)
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
❮
❯