ಯೆಹೆಜ್ಕೇಲನು 11 : 1 (KNV)
ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
ಯೆಹೆಜ್ಕೇಲನು 11 : 2 (KNV)
ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
ಯೆಹೆಜ್ಕೇಲನು 11 : 3 (KNV)
ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
ಯೆಹೆಜ್ಕೇಲನು 11 : 4 (KNV)
ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.
ಯೆಹೆಜ್ಕೇಲನು 11 : 5 (KNV)
ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
ಯೆಹೆಜ್ಕೇಲನು 11 : 6 (KNV)
ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
ಯೆಹೆಜ್ಕೇಲನು 11 : 7 (KNV)
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
ಯೆಹೆಜ್ಕೇಲನು 11 : 8 (KNV)
ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 11 : 9 (KNV)
ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
ಯೆಹೆಜ್ಕೇಲನು 11 : 10 (KNV)
ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
ಯೆಹೆಜ್ಕೇಲನು 11 : 11 (KNV)
ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
ಯೆಹೆಜ್ಕೇಲನು 11 : 12 (KNV)
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ಯೆಹೆಜ್ಕೇಲನು 11 : 13 (KNV)
ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
ಯೆಹೆಜ್ಕೇಲನು 11 : 14 (KNV)
ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
ಯೆಹೆಜ್ಕೇಲನು 11 : 15 (KNV)
ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
ಯೆಹೆಜ್ಕೇಲನು 11 : 16 (KNV)
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಯೆಹೆಜ್ಕೇಲನು 11 : 17 (KNV)
ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
ಯೆಹೆಜ್ಕೇಲನು 11 : 18 (KNV)
ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
ಯೆಹೆಜ್ಕೇಲನು 11 : 19 (KNV)
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ಯೆಹೆಜ್ಕೇಲನು 11 : 20 (KNV)
ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
ಯೆಹೆಜ್ಕೇಲನು 11 : 21 (KNV)
ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 11 : 22 (KNV)
ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
ಯೆಹೆಜ್ಕೇಲನು 11 : 23 (KNV)
ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
ಯೆಹೆಜ್ಕೇಲನು 11 : 24 (KNV)
ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.
ಯೆಹೆಜ್ಕೇಲನು 11 : 25 (KNV)
ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: