ಯೆಹೆಜ್ಕೇಲನು 15 : 1 (KNV)
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಯೆಹೆಜ್ಕೇಲನು 15 : 2 (KNV)
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
ಯೆಹೆಜ್ಕೇಲನು 15 : 3 (KNV)
ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
ಯೆಹೆಜ್ಕೇಲನು 15 : 4 (KNV)
ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
ಯೆಹೆಜ್ಕೇಲನು 15 : 5 (KNV)
ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
ಯೆಹೆಜ್ಕೇಲನು 15 : 6 (KNV)
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
ಯೆಹೆಜ್ಕೇಲನು 15 : 7 (KNV)
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
ಯೆಹೆಜ್ಕೇಲನು 15 : 8 (KNV)
ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
❮
❯