ಯೆಹೆಜ್ಕೇಲನು 21 : 1 (KNV)
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಯೆಹೆಜ್ಕೇಲನು 21 : 2 (KNV)
ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
ಯೆಹೆಜ್ಕೇಲನು 21 : 3 (KNV)
ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ಯೆಹೆಜ್ಕೇಲನು 21 : 4 (KNV)
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
ಯೆಹೆಜ್ಕೇಲನು 21 : 5 (KNV)
ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
ಯೆಹೆಜ್ಕೇಲನು 21 : 6 (KNV)
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
ಯೆಹೆಜ್ಕೇಲನು 21 : 7 (KNV)
ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 21 : 8 (KNV)
ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
ಯೆಹೆಜ್ಕೇಲನು 21 : 9 (KNV)
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
ಯೆಹೆಜ್ಕೇಲನು 21 : 10 (KNV)
ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ಯೆಹೆಜ್ಕೇಲನು 21 : 11 (KNV)
ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
ಯೆಹೆಜ್ಕೇಲನು 21 : 12 (KNV)
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
ಯೆಹೆಜ್ಕೇಲನು 21 : 13 (KNV)
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 21 : 14 (KNV)
ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
ಯೆಹೆಜ್ಕೇಲನು 21 : 15 (KNV)
ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
ಯೆಹೆಜ್ಕೇಲನು 21 : 16 (KNV)
ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
ಯೆಹೆಜ್ಕೇಲನು 21 : 17 (KNV)
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
ಯೆಹೆಜ್ಕೇಲನು 21 : 18 (KNV)
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
ಯೆಹೆಜ್ಕೇಲನು 21 : 19 (KNV)
ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
ಯೆಹೆಜ್ಕೇಲನು 21 : 20 (KNV)
ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
ಯೆಹೆಜ್ಕೇಲನು 21 : 21 (KNV)
ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.
ಯೆಹೆಜ್ಕೇಲನು 21 : 22 (KNV)
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ಯೆಹೆಜ್ಕೇಲನು 21 : 23 (KNV)
ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
ಯೆಹೆಜ್ಕೇಲನು 21 : 24 (KNV)
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
ಯೆಹೆಜ್ಕೇಲನು 21 : 25 (KNV)
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
ಯೆಹೆಜ್ಕೇಲನು 21 : 26 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
ಯೆಹೆಜ್ಕೇಲನು 21 : 27 (KNV)
ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
ಯೆಹೆಜ್ಕೇಲನು 21 : 28 (KNV)
ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
ಯೆಹೆಜ್ಕೇಲನು 21 : 29 (KNV)
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
ಯೆಹೆಜ್ಕೇಲನು 21 : 30 (KNV)
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಯೆಹೆಜ್ಕೇಲನು 21 : 31 (KNV)
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.
ಯೆಹೆಜ್ಕೇಲನು 21 : 32 (KNV)
ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32