ಯೆಹೆಜ್ಕೇಲನು 29 : 1 (KNV)
ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
ಯೆಹೆಜ್ಕೇಲನು 29 : 2 (KNV)
ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.
ಯೆಹೆಜ್ಕೇಲನು 29 : 3 (KNV)
ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
ಯೆಹೆಜ್ಕೇಲನು 29 : 4 (KNV)
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
ಯೆಹೆಜ್ಕೇಲನು 29 : 5 (KNV)
ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
ಯೆಹೆಜ್ಕೇಲನು 29 : 6 (KNV)
ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
ಯೆಹೆಜ್ಕೇಲನು 29 : 7 (KNV)
ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
ಯೆಹೆಜ್ಕೇಲನು 29 : 8 (KNV)
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
ಯೆಹೆಜ್ಕೇಲನು 29 : 9 (KNV)
ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
ಯೆಹೆಜ್ಕೇಲನು 29 : 10 (KNV)
ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
ಯೆಹೆಜ್ಕೇಲನು 29 : 11 (KNV)
ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
ಯೆಹೆಜ್ಕೇಲನು 29 : 12 (KNV)
ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
ಯೆಹೆಜ್ಕೇಲನು 29 : 13 (KNV)
ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
ಯೆಹೆಜ್ಕೇಲನು 29 : 14 (KNV)
ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
ಯೆಹೆಜ್ಕೇಲನು 29 : 15 (KNV)
ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
ಯೆಹೆಜ್ಕೇಲನು 29 : 16 (KNV)
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
ಯೆಹೆಜ್ಕೇಲನು 29 : 17 (KNV)
ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
ಯೆಹೆಜ್ಕೇಲನು 29 : 18 (KNV)
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಯೆಹೆಜ್ಕೇಲನು 29 : 19 (KNV)
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
ಯೆಹೆಜ್ಕೇಲನು 29 : 20 (KNV)
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 29 : 21 (KNV)
ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.

1 2 3 4 5 6 7 8 9 10 11 12 13 14 15 16 17 18 19 20 21