ಯೆಹೆಜ್ಕೇಲನು 39 : 1 (KNV)
ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್‌ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
ಯೆಹೆಜ್ಕೇಲನು 39 : 2 (KNV)
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
ಯೆಹೆಜ್ಕೇಲನು 39 : 3 (KNV)
ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
ಯೆಹೆಜ್ಕೇಲನು 39 : 4 (KNV)
ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ಯೆಹೆಜ್ಕೇಲನು 39 : 5 (KNV)
ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 39 : 6 (KNV)
ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
ಯೆಹೆಜ್ಕೇಲನು 39 : 7 (KNV)
ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
ಯೆಹೆಜ್ಕೇಲನು 39 : 8 (KNV)
ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
ಯೆಹೆಜ್ಕೇಲನು 39 : 9 (KNV)
ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
ಯೆಹೆಜ್ಕೇಲನು 39 : 10 (KNV)
ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 39 : 11 (KNV)
ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್‌ ಎಂದು ಕರೆಯುವರು.
ಯೆಹೆಜ್ಕೇಲನು 39 : 12 (KNV)
ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
ಯೆಹೆಜ್ಕೇಲನು 39 : 13 (KNV)
ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 39 : 14 (KNV)
ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
ಯೆಹೆಜ್ಕೇಲನು 39 : 15 (KNV)
ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
ಯೆಹೆಜ್ಕೇಲನು 39 : 16 (KNV)
ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
ಯೆಹೆಜ್ಕೇಲನು 39 : 17 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಯೆಹೆಜ್ಕೇಲನು 39 : 18 (KNV)
ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.
ಯೆಹೆಜ್ಕೇಲನು 39 : 19 (KNV)
ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.
ಯೆಹೆಜ್ಕೇಲನು 39 : 20 (KNV)
ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 39 : 21 (KNV)
ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
ಯೆಹೆಜ್ಕೇಲನು 39 : 22 (KNV)
ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ಯೆಹೆಜ್ಕೇಲನು 39 : 23 (KNV)
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ಯೆಹೆಜ್ಕೇಲನು 39 : 24 (KNV)
ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
ಯೆಹೆಜ್ಕೇಲನು 39 : 25 (KNV)
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಯೆಹೆಜ್ಕೇಲನು 39 : 26 (KNV)
ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
ಯೆಹೆಜ್ಕೇಲನು 39 : 27 (KNV)
ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
ಯೆಹೆಜ್ಕೇಲನು 39 : 28 (KNV)
ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 39 : 29 (KNV)
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: