ಯೆಹೆಜ್ಕೇಲನು 4 : 1 (KNV)
ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
ಯೆಹೆಜ್ಕೇಲನು 4 : 2 (KNV)
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ಯೆಹೆಜ್ಕೇಲನು 4 : 3 (KNV)
ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
ಯೆಹೆಜ್ಕೇಲನು 4 : 4 (KNV)
ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
ಯೆಹೆಜ್ಕೇಲನು 4 : 5 (KNV)
ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
ಯೆಹೆಜ್ಕೇಲನು 4 : 6 (KNV)
ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
ಯೆಹೆಜ್ಕೇಲನು 4 : 7 (KNV)
ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
ಯೆಹೆಜ್ಕೇಲನು 4 : 8 (KNV)
ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
ಯೆಹೆಜ್ಕೇಲನು 4 : 9 (KNV)
ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
ಯೆಹೆಜ್ಕೇಲನು 4 : 10 (KNV)
ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
ಯೆಹೆಜ್ಕೇಲನು 4 : 11 (KNV)
ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
ಯೆಹೆಜ್ಕೇಲನು 4 : 12 (KNV)
ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
ಯೆಹೆಜ್ಕೇಲನು 4 : 13 (KNV)
ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
ಯೆಹೆಜ್ಕೇಲನು 4 : 14 (KNV)
ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
ಯೆಹೆಜ್ಕೇಲನು 4 : 15 (KNV)
ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
ಯೆಹೆಜ್ಕೇಲನು 4 : 16 (KNV)
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.
ಯೆಹೆಜ್ಕೇಲನು 4 : 17 (KNV)
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: