ಯೆಹೆಜ್ಕೇಲನು 45 : 1 (KNV)
ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
ಯೆಹೆಜ್ಕೇಲನು 45 : 2 (KNV)
ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
ಯೆಹೆಜ್ಕೇಲನು 45 : 3 (KNV)
ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
ಯೆಹೆಜ್ಕೇಲನು 45 : 4 (KNV)
ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
ಯೆಹೆಜ್ಕೇಲನು 45 : 5 (KNV)
ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
ಯೆಹೆಜ್ಕೇಲನು 45 : 6 (KNV)
ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
ಯೆಹೆಜ್ಕೇಲನು 45 : 7 (KNV)
ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
ಯೆಹೆಜ್ಕೇಲನು 45 : 8 (KNV)
ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
ಯೆಹೆಜ್ಕೇಲನು 45 : 9 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 45 : 10 (KNV)
ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.
ಯೆಹೆಜ್ಕೇಲನು 45 : 11 (KNV)
ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
ಯೆಹೆಜ್ಕೇಲನು 45 : 12 (KNV)
ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
ಯೆಹೆಜ್ಕೇಲನು 45 : 13 (KNV)
ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
ಯೆಹೆಜ್ಕೇಲನು 45 : 14 (KNV)
ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.
ಯೆಹೆಜ್ಕೇಲನು 45 : 15 (KNV)
ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
ಯೆಹೆಜ್ಕೇಲನು 45 : 16 (KNV)
ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
ಯೆಹೆಜ್ಕೇಲನು 45 : 17 (KNV)
ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
ಯೆಹೆಜ್ಕೇಲನು 45 : 18 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
ಯೆಹೆಜ್ಕೇಲನು 45 : 19 (KNV)
ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
ಯೆಹೆಜ್ಕೇಲನು 45 : 20 (KNV)
ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
ಯೆಹೆಜ್ಕೇಲನು 45 : 21 (KNV)
ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
ಯೆಹೆಜ್ಕೇಲನು 45 : 22 (KNV)
ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
ಯೆಹೆಜ್ಕೇಲನು 45 : 23 (KNV)
ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
ಯೆಹೆಜ್ಕೇಲನು 45 : 24 (KNV)
ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
ಯೆಹೆಜ್ಕೇಲನು 45 : 25 (KNV)
ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: