ಯೆಹೆಜ್ಕೇಲನು 47 : 1 (KNV)
ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ಯೆಹೆಜ್ಕೇಲನು 47 : 2 (KNV)
ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
ಯೆಹೆಜ್ಕೇಲನು 47 : 3 (KNV)
ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.
ಯೆಹೆಜ್ಕೇಲನು 47 : 4 (KNV)
ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
ಯೆಹೆಜ್ಕೇಲನು 47 : 5 (KNV)
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
ಯೆಹೆಜ್ಕೇಲನು 47 : 6 (KNV)
ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.
ಯೆಹೆಜ್ಕೇಲನು 47 : 7 (KNV)
ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.
ಯೆಹೆಜ್ಕೇಲನು 47 : 8 (KNV)
ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
ಯೆಹೆಜ್ಕೇಲನು 47 : 9 (KNV)
ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
ಯೆಹೆಜ್ಕೇಲನು 47 : 10 (KNV)
ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
ಯೆಹೆಜ್ಕೇಲನು 47 : 11 (KNV)
ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
ಯೆಹೆಜ್ಕೇಲನು 47 : 12 (KNV)
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
ಯೆಹೆಜ್ಕೇಲನು 47 : 13 (KNV)
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
ಯೆಹೆಜ್ಕೇಲನು 47 : 14 (KNV)
ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
ಯೆಹೆಜ್ಕೇಲನು 47 : 15 (KNV)
ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
ಯೆಹೆಜ್ಕೇಲನು 47 : 16 (KNV)
ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
ಯೆಹೆಜ್ಕೇಲನು 47 : 17 (KNV)
ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
ಯೆಹೆಜ್ಕೇಲನು 47 : 18 (KNV)
ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
ಯೆಹೆಜ್ಕೇಲನು 47 : 19 (KNV)
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
ಯೆಹೆಜ್ಕೇಲನು 47 : 20 (KNV)
ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
ಯೆಹೆಜ್ಕೇಲನು 47 : 21 (KNV)
ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
ಯೆಹೆಜ್ಕೇಲನು 47 : 22 (KNV)
ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.
ಯೆಹೆಜ್ಕೇಲನು 47 : 23 (KNV)
ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: