ಎಜ್ರನು 1 : 1 (KNV)
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಎಜ್ರನು 1 : 2 (KNV)
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಎಜ್ರನು 1 : 3 (KNV)
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ಎಜ್ರನು 1 : 4 (KNV)
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
ಎಜ್ರನು 1 : 5 (KNV)
ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ಎಜ್ರನು 1 : 6 (KNV)
ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ಎಜ್ರನು 1 : 7 (KNV)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
ಎಜ್ರನು 1 : 8 (KNV)
ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
ಎಜ್ರನು 1 : 9 (KNV)
ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
ಎಜ್ರನು 1 : 10 (KNV)
ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
ಎಜ್ರನು 1 : 11 (KNV)
ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.

1 2 3 4 5 6 7 8 9 10 11

BG:

Opacity:

Color:


Size:


Font: