ಗಲಾತ್ಯದವರಿಗೆ 3 : 1 (KNV)
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ಗಲಾತ್ಯದವರಿಗೆ 3 : 2 (KNV)
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ಗಲಾತ್ಯದವರಿಗೆ 3 : 3 (KNV)
ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
ಗಲಾತ್ಯದವರಿಗೆ 3 : 4 (KNV)
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
ಗಲಾತ್ಯದವರಿಗೆ 3 : 5 (KNV)
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಗಲಾತ್ಯದವರಿಗೆ 3 : 6 (KNV)
ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
ಗಲಾತ್ಯದವರಿಗೆ 3 : 7 (KNV)
ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
ಗಲಾತ್ಯದವರಿಗೆ 3 : 8 (KNV)
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ಗಲಾತ್ಯದವರಿಗೆ 3 : 9 (KNV)
ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
ಗಲಾತ್ಯದವರಿಗೆ 3 : 10 (KNV)
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಗಲಾತ್ಯದವರಿಗೆ 3 : 11 (KNV)
ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
ಗಲಾತ್ಯದವರಿಗೆ 3 : 12 (KNV)
ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
ಗಲಾತ್ಯದವರಿಗೆ 3 : 13 (KNV)
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಗಲಾತ್ಯದವರಿಗೆ 3 : 14 (KNV)
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ಗಲಾತ್ಯದವರಿಗೆ 3 : 15 (KNV)
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ಗಲಾತ್ಯದವರಿಗೆ 3 : 16 (KNV)
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ಗಲಾತ್ಯದವರಿಗೆ 3 : 17 (KNV)
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
ಗಲಾತ್ಯದವರಿಗೆ 3 : 18 (KNV)
ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
ಗಲಾತ್ಯದವರಿಗೆ 3 : 19 (KNV)
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಗಲಾತ್ಯದವರಿಗೆ 3 : 20 (KNV)
ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
ಗಲಾತ್ಯದವರಿಗೆ 3 : 21 (KNV)
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
ಗಲಾತ್ಯದವರಿಗೆ 3 : 22 (KNV)
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ಗಲಾತ್ಯದವರಿಗೆ 3 : 23 (KNV)
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
ಗಲಾತ್ಯದವರಿಗೆ 3 : 24 (KNV)
ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
ಗಲಾತ್ಯದವರಿಗೆ 3 : 25 (KNV)
ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
ಗಲಾತ್ಯದವರಿಗೆ 3 : 26 (KNV)
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ಗಲಾತ್ಯದವರಿಗೆ 3 : 27 (KNV)
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಗಲಾತ್ಯದವರಿಗೆ 3 : 28 (KNV)
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
ಗಲಾತ್ಯದವರಿಗೆ 3 : 29 (KNV)
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
❮
❯