ಗಲಾತ್ಯದವರಿಗೆ 4 : 1 (KNV)
ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
ಗಲಾತ್ಯದವರಿಗೆ 4 : 2 (KNV)
ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.
ಗಲಾತ್ಯದವರಿಗೆ 4 : 3 (KNV)
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
ಗಲಾತ್ಯದವರಿಗೆ 4 : 4 (KNV)
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಗಲಾತ್ಯದವರಿಗೆ 4 : 5 (KNV)
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
ಗಲಾತ್ಯದವರಿಗೆ 4 : 6 (KNV)
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಗಲಾತ್ಯದವರಿಗೆ 4 : 7 (KNV)
ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
ಗಲಾತ್ಯದವರಿಗೆ 4 : 8 (KNV)
ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ಗಲಾತ್ಯದವರಿಗೆ 4 : 9 (KNV)
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
ಗಲಾತ್ಯದವರಿಗೆ 4 : 10 (KNV)
ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
ಗಲಾತ್ಯದವರಿಗೆ 4 : 11 (KNV)
ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
ಗಲಾತ್ಯದವರಿಗೆ 4 : 12 (KNV)
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
ಗಲಾತ್ಯದವರಿಗೆ 4 : 13 (KNV)
ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
ಗಲಾತ್ಯದವರಿಗೆ 4 : 14 (KNV)
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ಗಲಾತ್ಯದವರಿಗೆ 4 : 15 (KNV)
ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
ಗಲಾತ್ಯದವರಿಗೆ 4 : 16 (KNV)
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
ಗಲಾತ್ಯದವರಿಗೆ 4 : 17 (KNV)
ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
ಗಲಾತ್ಯದವರಿಗೆ 4 : 18 (KNV)
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
ಗಲಾತ್ಯದವರಿಗೆ 4 : 19 (KNV)
ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
ಗಲಾತ್ಯದವರಿಗೆ 4 : 20 (KNV)
ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
ಗಲಾತ್ಯದವರಿಗೆ 4 : 21 (KNV)
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
ಗಲಾತ್ಯದವರಿಗೆ 4 : 22 (KNV)
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ಗಲಾತ್ಯದವರಿಗೆ 4 : 23 (KNV)
ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
ಗಲಾತ್ಯದವರಿಗೆ 4 : 24 (KNV)
ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
ಗಲಾತ್ಯದವರಿಗೆ 4 : 25 (KNV)
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ಗಲಾತ್ಯದವರಿಗೆ 4 : 26 (KNV)
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
ಗಲಾತ್ಯದವರಿಗೆ 4 : 27 (KNV)
ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
ಗಲಾತ್ಯದವರಿಗೆ 4 : 28 (KNV)
ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
ಗಲಾತ್ಯದವರಿಗೆ 4 : 29 (KNV)
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
ಗಲಾತ್ಯದವರಿಗೆ 4 : 30 (KNV)
ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.
ಗಲಾತ್ಯದವರಿಗೆ 4 : 31 (KNV)
ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: