ಆದಿಕಾಂಡ 10 : 1 (KNV)
ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
ಆದಿಕಾಂಡ 10 : 2 (KNV)
ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
ಆದಿಕಾಂಡ 10 : 3 (KNV)
ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
ಆದಿಕಾಂಡ 10 : 4 (KNV)
ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
ಆದಿಕಾಂಡ 10 : 5 (KNV)
ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
ಆದಿಕಾಂಡ 10 : 6 (KNV)
ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
ಆದಿಕಾಂಡ 10 : 7 (KNV)
ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
ಆದಿಕಾಂಡ 10 : 8 (KNV)
ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
ಆದಿಕಾಂಡ 10 : 9 (KNV)
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
ಆದಿಕಾಂಡ 10 : 10 (KNV)
ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
ಆದಿಕಾಂಡ 10 : 11 (KNV)
ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
ಆದಿಕಾಂಡ 10 : 12 (KNV)
ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
ಆದಿಕಾಂಡ 10 : 13 (KNV)
ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
ಆದಿಕಾಂಡ 10 : 14 (KNV)
ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
ಆದಿಕಾಂಡ 10 : 15 (KNV)
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
ಆದಿಕಾಂಡ 10 : 16 (KNV)
ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
ಆದಿಕಾಂಡ 10 : 17 (KNV)
ಹಿವ್ವಿಯನೂ ಅರ್ಕಿಯನೂ ಸೀನಿಯನೂ
ಆದಿಕಾಂಡ 10 : 18 (KNV)
ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
ಆದಿಕಾಂಡ 10 : 19 (KNV)
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ಆದಿಕಾಂಡ 10 : 20 (KNV)
ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
ಆದಿಕಾಂಡ 10 : 21 (KNV)
ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
ಆದಿಕಾಂಡ 10 : 22 (KNV)
ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
ಆದಿಕಾಂಡ 10 : 23 (KNV)
ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
ಆದಿಕಾಂಡ 10 : 24 (KNV)
ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
ಆದಿಕಾಂಡ 10 : 25 (KNV)
ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
ಆದಿಕಾಂಡ 10 : 26 (KNV)
ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
ಆದಿಕಾಂಡ 10 : 27 (KNV)
ಹದೋರಾಮನೂ ಊಜಾಲನೂ ದಿಕ್ಲಾನನೂ
ಆದಿಕಾಂಡ 10 : 28 (KNV)
ಓಬಾಲನೂ ಅಬೀಮಯೇಲನೂ ಶೆಬನೂ
ಆದಿಕಾಂಡ 10 : 29 (KNV)
ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
ಆದಿಕಾಂಡ 10 : 30 (KNV)
ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
ಆದಿಕಾಂಡ 10 : 31 (KNV)
ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.
ಆದಿಕಾಂಡ 10 : 32 (KNV)
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
❮
❯