ಆದಿಕಾಂಡ 19 : 1 (KNV)
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
ಆದಿಕಾಂಡ 19 : 2 (KNV)
ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
ಆದಿಕಾಂಡ 19 : 3 (KNV)
ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
ಆದಿಕಾಂಡ 19 : 4 (KNV)
ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
ಆದಿಕಾಂಡ 19 : 5 (KNV)
ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
ಆದಿಕಾಂಡ 19 : 6 (KNV)
ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
ಆದಿಕಾಂಡ 19 : 7 (KNV)
ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
ಆದಿಕಾಂಡ 19 : 8 (KNV)
ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
ಆದಿಕಾಂಡ 19 : 9 (KNV)
ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
ಆದಿಕಾಂಡ 19 : 10 (KNV)
ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
ಆದಿಕಾಂಡ 19 : 11 (KNV)
ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ಆದಿಕಾಂಡ 19 : 12 (KNV)
ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
ಆದಿಕಾಂಡ 19 : 13 (KNV)
ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
ಆದಿಕಾಂಡ 19 : 14 (KNV)
ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
ಆದಿಕಾಂಡ 19 : 15 (KNV)
ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
ಆದಿಕಾಂಡ 19 : 16 (KNV)
ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
ಆದಿಕಾಂಡ 19 : 17 (KNV)
ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
ಆದಿಕಾಂಡ 19 : 18 (KNV)
ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
ಆದಿಕಾಂಡ 19 : 19 (KNV)
ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
ಆದಿಕಾಂಡ 19 : 20 (KNV)
ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
ಆದಿಕಾಂಡ 19 : 21 (KNV)
ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
ಆದಿಕಾಂಡ 19 : 22 (KNV)
ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
ಆದಿಕಾಂಡ 19 : 23 (KNV)
ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
ಆದಿಕಾಂಡ 19 : 24 (KNV)
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಆದಿಕಾಂಡ 19 : 25 (KNV)
ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ಆದಿಕಾಂಡ 19 : 26 (KNV)
ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
ಆದಿಕಾಂಡ 19 : 27 (KNV)
ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
ಆದಿಕಾಂಡ 19 : 28 (KNV)
ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
ಆದಿಕಾಂಡ 19 : 29 (KNV)
ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
ಆದಿಕಾಂಡ 19 : 30 (KNV)
ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
ಆದಿಕಾಂಡ 19 : 31 (KNV)
ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
ಆದಿಕಾಂಡ 19 : 32 (KNV)
ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ಆದಿಕಾಂಡ 19 : 33 (KNV)
ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ಆದಿಕಾಂಡ 19 : 34 (KNV)
ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ಆದಿಕಾಂಡ 19 : 35 (KNV)
ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ಆದಿಕಾಂಡ 19 : 36 (KNV)
ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
ಆದಿಕಾಂಡ 19 : 37 (KNV)
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
ಆದಿಕಾಂಡ 19 : 38 (KNV)
ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
❮
❯