ಆದಿಕಾಂಡ 28 : 1 (KNV)
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
ಆದಿಕಾಂಡ 28 : 2 (KNV)
ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
ಆದಿಕಾಂಡ 28 : 3 (KNV)
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಆದಿಕಾಂಡ 28 : 4 (KNV)
ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
ಆದಿಕಾಂಡ 28 : 5 (KNV)
ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
ಆದಿಕಾಂಡ 28 : 6 (KNV)
ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
ಆದಿಕಾಂಡ 28 : 7 (KNV)
ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
ಆದಿಕಾಂಡ 28 : 8 (KNV)
ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
ಆದಿಕಾಂಡ 28 : 9 (KNV)
ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
ಆದಿಕಾಂಡ 28 : 10 (KNV)
ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
ಆದಿಕಾಂಡ 28 : 11 (KNV)
ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
ಆದಿಕಾಂಡ 28 : 12 (KNV)
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಆದಿಕಾಂಡ 28 : 13 (KNV)
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಆದಿಕಾಂಡ 28 : 14 (KNV)
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ಆದಿಕಾಂಡ 28 : 15 (KNV)
ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ಆದಿಕಾಂಡ 28 : 16 (KNV)
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ಆದಿಕಾಂಡ 28 : 17 (KNV)
ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
ಆದಿಕಾಂಡ 28 : 18 (KNV)
ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಆದಿಕಾಂಡ 28 : 19 (KNV)
ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
ಆದಿಕಾಂಡ 28 : 20 (KNV)
ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
ಆದಿಕಾಂಡ 28 : 21 (KNV)
ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.
ಆದಿಕಾಂಡ 28 : 22 (KNV)
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
❮
❯