ಆದಿಕಾಂಡ 29 : 1 (KNV)
ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
ಆದಿಕಾಂಡ 29 : 2 (KNV)
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
ಆದಿಕಾಂಡ 29 : 3 (KNV)
ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
ಆದಿಕಾಂಡ 29 : 4 (KNV)
ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
ಆದಿಕಾಂಡ 29 : 5 (KNV)
ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
ಆದಿಕಾಂಡ 29 : 6 (KNV)
ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
ಆದಿಕಾಂಡ 29 : 7 (KNV)
ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
ಆದಿಕಾಂಡ 29 : 8 (KNV)
ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
ಆದಿಕಾಂಡ 29 : 9 (KNV)
ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
ಆದಿಕಾಂಡ 29 : 10 (KNV)
ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
ಆದಿಕಾಂಡ 29 : 11 (KNV)
ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
ಆದಿಕಾಂಡ 29 : 12 (KNV)
ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
ಆದಿಕಾಂಡ 29 : 13 (KNV)
ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
ಆದಿಕಾಂಡ 29 : 14 (KNV)
ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
ಆದಿಕಾಂಡ 29 : 15 (KNV)
ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
ಆದಿಕಾಂಡ 29 : 16 (KNV)
ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
ಆದಿಕಾಂಡ 29 : 17 (KNV)
ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
ಆದಿಕಾಂಡ 29 : 18 (KNV)
ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ಆದಿಕಾಂಡ 29 : 19 (KNV)
ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
ಆದಿಕಾಂಡ 29 : 20 (KNV)
ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
ಆದಿಕಾಂಡ 29 : 21 (KNV)
ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
ಆದಿಕಾಂಡ 29 : 22 (KNV)
ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
ಆದಿಕಾಂಡ 29 : 23 (KNV)
ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
ಆದಿಕಾಂಡ 29 : 24 (KNV)
ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
ಆದಿಕಾಂಡ 29 : 25 (KNV)
ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
ಆದಿಕಾಂಡ 29 : 26 (KNV)
ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
ಆದಿಕಾಂಡ 29 : 27 (KNV)
ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
ಆದಿಕಾಂಡ 29 : 28 (KNV)
ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
ಆದಿಕಾಂಡ 29 : 29 (KNV)
ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
ಆದಿಕಾಂಡ 29 : 30 (KNV)
ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
ಆದಿಕಾಂಡ 29 : 31 (KNV)
ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
ಆದಿಕಾಂಡ 29 : 32 (KNV)
ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.
ಆದಿಕಾಂಡ 29 : 33 (KNV)
ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ಆದಿಕಾಂಡ 29 : 34 (KNV)
ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ಆದಿಕಾಂಡ 29 : 35 (KNV)
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: