ಆದಿಕಾಂಡ 3 : 1 (KNV)
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ಆದಿಕಾಂಡ 3 : 2 (KNV)
ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
ಆದಿಕಾಂಡ 3 : 3 (KNV)
ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ಆದಿಕಾಂಡ 3 : 4 (KNV)
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ಆದಿಕಾಂಡ 3 : 5 (KNV)
ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
ಆದಿಕಾಂಡ 3 : 6 (KNV)
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಆದಿಕಾಂಡ 3 : 7 (KNV)
ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
ಆದಿಕಾಂಡ 3 : 8 (KNV)
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
ಆದಿಕಾಂಡ 3 : 9 (KNV)
ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
ಆದಿಕಾಂಡ 3 : 10 (KNV)
ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
ಆದಿಕಾಂಡ 3 : 11 (KNV)
ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
ಆದಿಕಾಂಡ 3 : 12 (KNV)
ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
ಆದಿಕಾಂಡ 3 : 13 (KNV)
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಆದಿಕಾಂಡ 3 : 14 (KNV)
ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
ಆದಿಕಾಂಡ 3 : 15 (KNV)
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಆದಿಕಾಂಡ 3 : 16 (KNV)
ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
ಆದಿಕಾಂಡ 3 : 17 (KNV)
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
ಆದಿಕಾಂಡ 3 : 18 (KNV)
ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
ಆದಿಕಾಂಡ 3 : 19 (KNV)
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಆದಿಕಾಂಡ 3 : 20 (KNV)
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
ಆದಿಕಾಂಡ 3 : 21 (KNV)
ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
ಆದಿಕಾಂಡ 3 : 22 (KNV)
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಆದಿಕಾಂಡ 3 : 23 (KNV)
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಆದಿಕಾಂಡ 3 : 24 (KNV)
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: