ಆದಿಕಾಂಡ 33 : 1 (KNV)
ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
ಆದಿಕಾಂಡ 33 : 2 (KNV)
ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.
ಆದಿಕಾಂಡ 33 : 3 (KNV)
ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.
ಆದಿಕಾಂಡ 33 : 4 (KNV)
ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
ಆದಿಕಾಂಡ 33 : 5 (KNV)
ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
ಆದಿಕಾಂಡ 33 : 6 (KNV)
ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
ಆದಿಕಾಂಡ 33 : 7 (KNV)
ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
ಆದಿಕಾಂಡ 33 : 8 (KNV)
ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
ಆದಿಕಾಂಡ 33 : 9 (KNV)
ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
ಆದಿಕಾಂಡ 33 : 10 (KNV)
ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
ಆದಿಕಾಂಡ 33 : 11 (KNV)
ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
ಆದಿಕಾಂಡ 33 : 12 (KNV)
ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
ಆದಿಕಾಂಡ 33 : 13 (KNV)
ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
ಆದಿಕಾಂಡ 33 : 14 (KNV)
ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
ಆದಿಕಾಂಡ 33 : 15 (KNV)
ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
ಆದಿಕಾಂಡ 33 : 16 (KNV)
ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
ಆದಿಕಾಂಡ 33 : 17 (KNV)
ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
ಆದಿಕಾಂಡ 33 : 18 (KNV)
ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
ಆದಿಕಾಂಡ 33 : 19 (KNV)
ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.
ಆದಿಕಾಂಡ 33 : 20 (KNV)
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: