ಆದಿಕಾಂಡ 43 : 1 (KNV)
ದೇಶದಲ್ಲಿ ಬರವು ಘೋರವಾಗಿತ್ತು.
ಆದಿಕಾಂಡ 43 : 2 (KNV)
ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
ಆದಿಕಾಂಡ 43 : 3 (KNV)
ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
ಆದಿಕಾಂಡ 43 : 4 (KNV)
ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
ಆದಿಕಾಂಡ 43 : 5 (KNV)
ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
ಆದಿಕಾಂಡ 43 : 6 (KNV)
ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
ಆದಿಕಾಂಡ 43 : 7 (KNV)
ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
ಆದಿಕಾಂಡ 43 : 8 (KNV)
ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
ಆದಿಕಾಂಡ 43 : 9 (KNV)
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
ಆದಿಕಾಂಡ 43 : 10 (KNV)
ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
ಆದಿಕಾಂಡ 43 : 11 (KNV)
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಆದಿಕಾಂಡ 43 : 12 (KNV)
ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
ಆದಿಕಾಂಡ 43 : 13 (KNV)
ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
ಆದಿಕಾಂಡ 43 : 14 (KNV)
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ಆದಿಕಾಂಡ 43 : 15 (KNV)
ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
ಆದಿಕಾಂಡ 43 : 16 (KNV)
ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
ಆದಿಕಾಂಡ 43 : 17 (KNV)
ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
ಆದಿಕಾಂಡ 43 : 18 (KNV)
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
ಆದಿಕಾಂಡ 43 : 19 (KNV)
ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
ಆದಿಕಾಂಡ 43 : 20 (KNV)
ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
ಆದಿಕಾಂಡ 43 : 21 (KNV)
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
ಆದಿಕಾಂಡ 43 : 22 (KNV)
ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
ಆದಿಕಾಂಡ 43 : 23 (KNV)
ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
ಆದಿಕಾಂಡ 43 : 24 (KNV)
ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
ಆದಿಕಾಂಡ 43 : 25 (KNV)
ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
ಆದಿಕಾಂಡ 43 : 26 (KNV)
ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
ಆದಿಕಾಂಡ 43 : 27 (KNV)
ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
ಆದಿಕಾಂಡ 43 : 28 (KNV)
ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
ಆದಿಕಾಂಡ 43 : 29 (KNV)
ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
ಆದಿಕಾಂಡ 43 : 30 (KNV)
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
ಆದಿಕಾಂಡ 43 : 31 (KNV)
ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
ಆದಿಕಾಂಡ 43 : 32 (KNV)
ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
ಆದಿಕಾಂಡ 43 : 33 (KNV)
ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.
ಆದಿಕಾಂಡ 43 : 34 (KNV)
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: