ಆದಿಕಾಂಡ 45 : 1 (KNV)
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
ಆದಿಕಾಂಡ 45 : 2 (KNV)
ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
ಆದಿಕಾಂಡ 45 : 3 (KNV)
ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
ಆದಿಕಾಂಡ 45 : 4 (KNV)
ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
ಆದಿಕಾಂಡ 45 : 5 (KNV)
ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ಆದಿಕಾಂಡ 45 : 6 (KNV)
ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ಆದಿಕಾಂಡ 45 : 7 (KNV)
ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ಆದಿಕಾಂಡ 45 : 8 (KNV)
ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
ಆದಿಕಾಂಡ 45 : 9 (KNV)
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
ಆದಿಕಾಂಡ 45 : 10 (KNV)
ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
ಆದಿಕಾಂಡ 45 : 11 (KNV)
ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
ಆದಿಕಾಂಡ 45 : 12 (KNV)
ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
ಆದಿಕಾಂಡ 45 : 13 (KNV)
ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
ಆದಿಕಾಂಡ 45 : 14 (KNV)
ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
ಆದಿಕಾಂಡ 45 : 15 (KNV)
ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ಆದಿಕಾಂಡ 45 : 16 (KNV)
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
ಆದಿಕಾಂಡ 45 : 17 (KNV)
ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ
ಆದಿಕಾಂಡ 45 : 18 (KNV)
ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
ಆದಿಕಾಂಡ 45 : 19 (KNV)
ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
ಆದಿಕಾಂಡ 45 : 20 (KNV)
ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
ಆದಿಕಾಂಡ 45 : 21 (KNV)
ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
ಆದಿಕಾಂಡ 45 : 22 (KNV)
ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
ಆದಿಕಾಂಡ 45 : 23 (KNV)
ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
ಆದಿಕಾಂಡ 45 : 24 (KNV)
ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
ಆದಿಕಾಂಡ 45 : 25 (KNV)
ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
ಆದಿಕಾಂಡ 45 : 26 (KNV)
ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
ಆದಿಕಾಂಡ 45 : 27 (KNV)
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.
ಆದಿಕಾಂಡ 45 : 28 (KNV)
ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
❮
❯