ಆದಿಕಾಂಡ 46 : 1 (KNV)
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
ಆದಿಕಾಂಡ 46 : 2 (KNV)
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಆದಿಕಾಂಡ 46 : 3 (KNV)
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
ಆದಿಕಾಂಡ 46 : 4 (KNV)
ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
ಆದಿಕಾಂಡ 46 : 5 (KNV)
ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
ಆದಿಕಾಂಡ 46 : 6 (KNV)
ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
ಆದಿಕಾಂಡ 46 : 7 (KNV)
ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
ಆದಿಕಾಂಡ 46 : 8 (KNV)
ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
ಆದಿಕಾಂಡ 46 : 9 (KNV)
ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
ಆದಿಕಾಂಡ 46 : 10 (KNV)
ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
ಆದಿಕಾಂಡ 46 : 11 (KNV)
ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
ಆದಿಕಾಂಡ 46 : 12 (KNV)
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಆದಿಕಾಂಡ 46 : 13 (KNV)
ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
ಆದಿಕಾಂಡ 46 : 14 (KNV)
ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
ಆದಿಕಾಂಡ 46 : 15 (KNV)
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
ಆದಿಕಾಂಡ 46 : 16 (KNV)
ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
ಆದಿಕಾಂಡ 46 : 17 (KNV)
ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
ಆದಿಕಾಂಡ 46 : 18 (KNV)
ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
ಆದಿಕಾಂಡ 46 : 19 (KNV)
ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು.
ಆದಿಕಾಂಡ 46 : 20 (KNV)
ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
ಆದಿಕಾಂಡ 46 : 21 (KNV)
ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
ಆದಿಕಾಂಡ 46 : 22 (KNV)
ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
ಆದಿಕಾಂಡ 46 : 23 (KNV)
ದಾನನ ಮಗನು ಹುಶೀಮನು.
ಆದಿಕಾಂಡ 46 : 24 (KNV)
ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
ಆದಿಕಾಂಡ 46 : 25 (KNV)
ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
ಆದಿಕಾಂಡ 46 : 26 (KNV)
ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
ಆದಿಕಾಂಡ 46 : 27 (KNV)
ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
ಆದಿಕಾಂಡ 46 : 28 (KNV)
ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
ಆದಿಕಾಂಡ 46 : 29 (KNV)
ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
ಆದಿಕಾಂಡ 46 : 30 (KNV)
ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
ಆದಿಕಾಂಡ 46 : 31 (KNV)
ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
ಆದಿಕಾಂಡ 46 : 32 (KNV)
ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
ಆದಿಕಾಂಡ 46 : 33 (KNV)
ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.
ಆದಿಕಾಂಡ 46 : 34 (KNV)
ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
❮
❯