ಆದಿಕಾಂಡ 49 : 1 (KNV)
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಆದಿಕಾಂಡ 49 : 2 (KNV)
ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
ಆದಿಕಾಂಡ 49 : 3 (KNV)
ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
ಆದಿಕಾಂಡ 49 : 4 (KNV)
ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
ಆದಿಕಾಂಡ 49 : 5 (KNV)
ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
ಆದಿಕಾಂಡ 49 : 6 (KNV)
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
ಆದಿಕಾಂಡ 49 : 7 (KNV)
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
ಆದಿಕಾಂಡ 49 : 8 (KNV)
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ಆದಿಕಾಂಡ 49 : 9 (KNV)
ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
ಆದಿಕಾಂಡ 49 : 10 (KNV)
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಆದಿಕಾಂಡ 49 : 11 (KNV)
ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
ಆದಿಕಾಂಡ 49 : 12 (KNV)
ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
ಆದಿಕಾಂಡ 49 : 13 (KNV)
ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ಆದಿಕಾಂಡ 49 : 14 (KNV)
ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
ಆದಿಕಾಂಡ 49 : 15 (KNV)
ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
ಆದಿಕಾಂಡ 49 : 16 (KNV)
ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
ಆದಿಕಾಂಡ 49 : 17 (KNV)
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ಆದಿಕಾಂಡ 49 : 18 (KNV)
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ಆದಿಕಾಂಡ 49 : 19 (KNV)
ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
ಆದಿಕಾಂಡ 49 : 20 (KNV)
ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
ಆದಿಕಾಂಡ 49 : 21 (KNV)
ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
ಆದಿಕಾಂಡ 49 : 22 (KNV)
ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
ಆದಿಕಾಂಡ 49 : 23 (KNV)
ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
ಆದಿಕಾಂಡ 49 : 24 (KNV)
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ಆದಿಕಾಂಡ 49 : 25 (KNV)
ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
ಆದಿಕಾಂಡ 49 : 26 (KNV)
ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
ಆದಿಕಾಂಡ 49 : 27 (KNV)
ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
ಆದಿಕಾಂಡ 49 : 28 (KNV)
ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
ಆದಿಕಾಂಡ 49 : 29 (KNV)
ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ಆದಿಕಾಂಡ 49 : 30 (KNV)
ಕಾನಾನ್‌ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
ಆದಿಕಾಂಡ 49 : 31 (KNV)
ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
ಆದಿಕಾಂಡ 49 : 32 (KNV)
ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಆದಿಕಾಂಡ 49 : 33 (KNV)
ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: