ಆದಿಕಾಂಡ 50 : 1 (KNV)
ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
ಆದಿಕಾಂಡ 50 : 2 (KNV)
ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ಆದಿಕಾಂಡ 50 : 3 (KNV)
ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
ಆದಿಕಾಂಡ 50 : 4 (KNV)
ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
ಆದಿಕಾಂಡ 50 : 5 (KNV)
ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
ಆದಿಕಾಂಡ 50 : 6 (KNV)
ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
ಆದಿಕಾಂಡ 50 : 7 (KNV)
ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
ಆದಿಕಾಂಡ 50 : 8 (KNV)
ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
ಆದಿಕಾಂಡ 50 : 9 (KNV)
ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
ಆದಿಕಾಂಡ 50 : 10 (KNV)
ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ಆದಿಕಾಂಡ 50 : 11 (KNV)
ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
ಆದಿಕಾಂಡ 50 : 12 (KNV)
ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
ಆದಿಕಾಂಡ 50 : 13 (KNV)
ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
ಆದಿಕಾಂಡ 50 : 14 (KNV)
ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
ಆದಿಕಾಂಡ 50 : 15 (KNV)
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ಆದಿಕಾಂಡ 50 : 16 (KNV)
ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
ಆದಿಕಾಂಡ 50 : 17 (KNV)
ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
ಆದಿಕಾಂಡ 50 : 18 (KNV)
ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
ಆದಿಕಾಂಡ 50 : 19 (KNV)
ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
ಆದಿಕಾಂಡ 50 : 20 (KNV)
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಆದಿಕಾಂಡ 50 : 21 (KNV)
ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
ಆದಿಕಾಂಡ 50 : 22 (KNV)
ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
ಆದಿಕಾಂಡ 50 : 23 (KNV)
ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
ಆದಿಕಾಂಡ 50 : 24 (KNV)
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಆದಿಕಾಂಡ 50 : 25 (KNV)
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
ಆದಿಕಾಂಡ 50 : 26 (KNV)
ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: