ಹಬಕ್ಕೂಕ್ಕ 1 : 1 (KNV)
ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
ಹಬಕ್ಕೂಕ್ಕ 1 : 2 (KNV)
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ಹಬಕ್ಕೂಕ್ಕ 1 : 3 (KNV)
ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
ಹಬಕ್ಕೂಕ್ಕ 1 : 4 (KNV)
ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
ಹಬಕ್ಕೂಕ್ಕ 1 : 5 (KNV)
ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
ಹಬಕ್ಕೂಕ್ಕ 1 : 6 (KNV)
ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ಹಬಕ್ಕೂಕ್ಕ 1 : 7 (KNV)
ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
ಹಬಕ್ಕೂಕ್ಕ 1 : 8 (KNV)
ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
ಹಬಕ್ಕೂಕ್ಕ 1 : 9 (KNV)
ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
ಹಬಕ್ಕೂಕ್ಕ 1 : 10 (KNV)
ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
ಹಬಕ್ಕೂಕ್ಕ 1 : 11 (KNV)
ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
ಹಬಕ್ಕೂಕ್ಕ 1 : 12 (KNV)
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಹಬಕ್ಕೂಕ್ಕ 1 : 13 (KNV)
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ಹಬಕ್ಕೂಕ್ಕ 1 : 14 (KNV)
ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
ಹಬಕ್ಕೂಕ್ಕ 1 : 15 (KNV)
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
ಹಬಕ್ಕೂಕ್ಕ 1 : 16 (KNV)
ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.
ಹಬಕ್ಕೂಕ್ಕ 1 : 17 (KNV)
ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

1 2 3 4 5 6 7 8 9 10 11 12 13 14 15 16 17