ಇಬ್ರಿಯರಿಗೆ 11 : 1 (KNV)
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ಇಬ್ರಿಯರಿಗೆ 11 : 2 (KNV)
ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
ಇಬ್ರಿಯರಿಗೆ 11 : 3 (KNV)
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಇಬ್ರಿಯರಿಗೆ 11 : 4 (KNV)
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಇಬ್ರಿಯರಿಗೆ 11 : 5 (KNV)
ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
ಇಬ್ರಿಯರಿಗೆ 11 : 6 (KNV)
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಇಬ್ರಿಯರಿಗೆ 11 : 7 (KNV)
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಇಬ್ರಿಯರಿಗೆ 11 : 8 (KNV)
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ಇಬ್ರಿಯರಿಗೆ 11 : 9 (KNV)
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
ಇಬ್ರಿಯರಿಗೆ 11 : 10 (KNV)
ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ಇಬ್ರಿಯರಿಗೆ 11 : 11 (KNV)
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
ಇಬ್ರಿಯರಿಗೆ 11 : 12 (KNV)
ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
ಇಬ್ರಿಯರಿಗೆ 11 : 13 (KNV)
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ಇಬ್ರಿಯರಿಗೆ 11 : 14 (KNV)
ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
ಇಬ್ರಿಯರಿಗೆ 11 : 15 (KNV)
ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
ಇಬ್ರಿಯರಿಗೆ 11 : 16 (KNV)
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಇಬ್ರಿಯರಿಗೆ 11 : 17 (KNV)
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
ಇಬ್ರಿಯರಿಗೆ 11 : 18 (KNV)
ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
ಇಬ್ರಿಯರಿಗೆ 11 : 19 (KNV)
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
ಇಬ್ರಿಯರಿಗೆ 11 : 20 (KNV)
ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
ಇಬ್ರಿಯರಿಗೆ 11 : 21 (KNV)
ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
ಇಬ್ರಿಯರಿಗೆ 11 : 22 (KNV)
ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ಇಬ್ರಿಯರಿಗೆ 11 : 23 (KNV)
ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
ಇಬ್ರಿಯರಿಗೆ 11 : 24 (KNV)
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
ಇಬ್ರಿಯರಿಗೆ 11 : 25 (KNV)
ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
ಇಬ್ರಿಯರಿಗೆ 11 : 26 (KNV)
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ಇಬ್ರಿಯರಿಗೆ 11 : 27 (KNV)
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
ಇಬ್ರಿಯರಿಗೆ 11 : 28 (KNV)
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ಇಬ್ರಿಯರಿಗೆ 11 : 29 (KNV)
ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
ಇಬ್ರಿಯರಿಗೆ 11 : 30 (KNV)
ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
ಇಬ್ರಿಯರಿಗೆ 11 : 31 (KNV)
ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ಇಬ್ರಿಯರಿಗೆ 11 : 32 (KNV)
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
ಇಬ್ರಿಯರಿಗೆ 11 : 33 (KNV)
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ಇಬ್ರಿಯರಿಗೆ 11 : 34 (KNV)
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
ಇಬ್ರಿಯರಿಗೆ 11 : 35 (KNV)
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ಇಬ್ರಿಯರಿಗೆ 11 : 36 (KNV)
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ಇಬ್ರಿಯರಿಗೆ 11 : 37 (KNV)
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ಇಬ್ರಿಯರಿಗೆ 11 : 38 (KNV)
ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
ಇಬ್ರಿಯರಿಗೆ 11 : 39 (KNV)
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;
ಇಬ್ರಿಯರಿಗೆ 11 : 40 (KNV)
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: