ಇಬ್ರಿಯರಿಗೆ 2 : 1 (KNV)
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಇಬ್ರಿಯರಿಗೆ 2 : 2 (KNV)
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ಇಬ್ರಿಯರಿಗೆ 2 : 3 (KNV)
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಇಬ್ರಿಯರಿಗೆ 2 : 4 (KNV)
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಇಬ್ರಿಯರಿಗೆ 2 : 5 (KNV)
ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
ಇಬ್ರಿಯರಿಗೆ 2 : 6 (KNV)
ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
ಇಬ್ರಿಯರಿಗೆ 2 : 7 (KNV)
ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
ಇಬ್ರಿಯರಿಗೆ 2 : 8 (KNV)
ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
ಇಬ್ರಿಯರಿಗೆ 2 : 9 (KNV)
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಇಬ್ರಿಯರಿಗೆ 2 : 10 (KNV)
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಇಬ್ರಿಯರಿಗೆ 2 : 11 (KNV)
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
ಇಬ್ರಿಯರಿಗೆ 2 : 12 (KNV)
ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
ಇಬ್ರಿಯರಿಗೆ 2 : 13 (KNV)
ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
ಇಬ್ರಿಯರಿಗೆ 2 : 14 (KNV)
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಇಬ್ರಿಯರಿಗೆ 2 : 15 (KNV)
ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ಇಬ್ರಿಯರಿಗೆ 2 : 16 (KNV)
ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
ಇಬ್ರಿಯರಿಗೆ 2 : 17 (KNV)
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
ಇಬ್ರಿಯರಿಗೆ 2 : 18 (KNV)
ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: