ಇಬ್ರಿಯರಿಗೆ 3 : 1 (KNV)
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಇಬ್ರಿಯರಿಗೆ 3 : 2 (KNV)
ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
ಇಬ್ರಿಯರಿಗೆ 3 : 3 (KNV)
ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
ಇಬ್ರಿಯರಿಗೆ 3 : 4 (KNV)
ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
ಇಬ್ರಿಯರಿಗೆ 3 : 5 (KNV)
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ಇಬ್ರಿಯರಿಗೆ 3 : 6 (KNV)
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ಇಬ್ರಿಯರಿಗೆ 3 : 7 (KNV)
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಇಬ್ರಿಯರಿಗೆ 3 : 8 (KNV)
ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
ಇಬ್ರಿಯರಿಗೆ 3 : 9 (KNV)
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
ಇಬ್ರಿಯರಿಗೆ 3 : 10 (KNV)
ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
ಇಬ್ರಿಯರಿಗೆ 3 : 11 (KNV)
ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
ಇಬ್ರಿಯರಿಗೆ 3 : 12 (KNV)
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ಇಬ್ರಿಯರಿಗೆ 3 : 13 (KNV)
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಇಬ್ರಿಯರಿಗೆ 3 : 14 (KNV)
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಇಬ್ರಿಯರಿಗೆ 3 : 15 (KNV)
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ಇಬ್ರಿಯರಿಗೆ 3 : 16 (KNV)
ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
ಇಬ್ರಿಯರಿಗೆ 3 : 17 (KNV)
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
ಇಬ್ರಿಯರಿಗೆ 3 : 18 (KNV)
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?
ಇಬ್ರಿಯರಿಗೆ 3 : 19 (KNV)
ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
❮
❯