ಇಬ್ರಿಯರಿಗೆ 5 : 1 (KNV)
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ಇಬ್ರಿಯರಿಗೆ 5 : 2 (KNV)
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
ಇಬ್ರಿಯರಿಗೆ 5 : 3 (KNV)
ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
ಇಬ್ರಿಯರಿಗೆ 5 : 4 (KNV)
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ಇಬ್ರಿಯರಿಗೆ 5 : 5 (KNV)
ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
ಇಬ್ರಿಯರಿಗೆ 5 : 6 (KNV)
ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ಇಬ್ರಿಯರಿಗೆ 5 : 7 (KNV)
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಇಬ್ರಿಯರಿಗೆ 5 : 8 (KNV)
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ಇಬ್ರಿಯರಿಗೆ 5 : 9 (KNV)
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಇಬ್ರಿಯರಿಗೆ 5 : 10 (KNV)
ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
ಇಬ್ರಿಯರಿಗೆ 5 : 11 (KNV)
ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ಇಬ್ರಿಯರಿಗೆ 5 : 12 (KNV)
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
ಇಬ್ರಿಯರಿಗೆ 5 : 13 (KNV)
ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.
ಇಬ್ರಿಯರಿಗೆ 5 : 14 (KNV)
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.

1 2 3 4 5 6 7 8 9 10 11 12 13 14

BG:

Opacity:

Color:


Size:


Font: