ಇಬ್ರಿಯರಿಗೆ 6 : 1 (KNV)
ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
ಇಬ್ರಿಯರಿಗೆ 6 : 2 (KNV)
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ಇಬ್ರಿಯರಿಗೆ 6 : 3 (KNV)
ದೇವರ ಚಿತ್ತವಾದರೆ ಹೀಗೆ ಮಾಡುವೆವು.
ಇಬ್ರಿಯರಿಗೆ 6 : 4 (KNV)
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ಇಬ್ರಿಯರಿಗೆ 6 : 5 (KNV)
ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
ಇಬ್ರಿಯರಿಗೆ 6 : 6 (KNV)
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
ಇಬ್ರಿಯರಿಗೆ 6 : 7 (KNV)
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ಇಬ್ರಿಯರಿಗೆ 6 : 8 (KNV)
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
ಇಬ್ರಿಯರಿಗೆ 6 : 9 (KNV)
ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
ಇಬ್ರಿಯರಿಗೆ 6 : 10 (KNV)
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಇಬ್ರಿಯರಿಗೆ 6 : 11 (KNV)
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಇಬ್ರಿಯರಿಗೆ 6 : 12 (KNV)
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ಇಬ್ರಿಯರಿಗೆ 6 : 13 (KNV)
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
ಇಬ್ರಿಯರಿಗೆ 6 : 14 (KNV)
ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
ಇಬ್ರಿಯರಿಗೆ 6 : 15 (KNV)
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ಇಬ್ರಿಯರಿಗೆ 6 : 16 (KNV)
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ಇಬ್ರಿಯರಿಗೆ 6 : 17 (KNV)
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಇಬ್ರಿಯರಿಗೆ 6 : 18 (KNV)
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ಇಬ್ರಿಯರಿಗೆ 6 : 19 (KNV)
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
ಇಬ್ರಿಯರಿಗೆ 6 : 20 (KNV)
ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
❮
❯