ಹೋಶೇ 12 : 1 (KNV)
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
ಹೋಶೇ 12 : 2 (KNV)
ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
ಹೋಶೇ 12 : 3 (KNV)
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಹೋಶೇ 12 : 4 (KNV)
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಹೋಶೇ 12 : 5 (KNV)
ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
ಹೋಶೇ 12 : 6 (KNV)
ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
ಹೋಶೇ 12 : 7 (KNV)
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಹೋಶೇ 12 : 8 (KNV)
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ಹೋಶೇ 12 : 9 (KNV)
ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
ಹೋಶೇ 12 : 10 (KNV)
ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
ಹೋಶೇ 12 : 11 (KNV)
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
ಹೋಶೇ 12 : 12 (KNV)
ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
ಹೋಶೇ 12 : 13 (KNV)
ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.
ಹೋಶೇ 12 : 14 (KNV)
ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.

1 2 3 4 5 6 7 8 9 10 11 12 13 14