ಹೋಶೇ 5 : 1 (KNV)
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ಹೋಶೇ 5 : 2 (KNV)
ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
ಹೋಶೇ 5 : 3 (KNV)
ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
ಹೋಶೇ 5 : 4 (KNV)
ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
ಹೋಶೇ 5 : 5 (KNV)
ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.
ಹೋಶೇ 5 : 6 (KNV)
ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
ಹೋಶೇ 5 : 7 (KNV)
ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
ಹೋಶೇ 5 : 8 (KNV)
ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
ಹೋಶೇ 5 : 9 (KNV)
ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
ಹೋಶೇ 5 : 10 (KNV)
ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
ಹೋಶೇ 5 : 11 (KNV)
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಹೋಶೇ 5 : 12 (KNV)
ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
ಹೋಶೇ 5 : 13 (KNV)
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ಹೋಶೇ 5 : 14 (KNV)
ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.
ಹೋಶೇ 5 : 15 (KNV)
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

1 2 3 4 5 6 7 8 9 10 11 12 13 14 15