ಹೋಶೇ 6 : 1 (KNV)
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ಹೋಶೇ 6 : 2 (KNV)
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಹೋಶೇ 6 : 3 (KNV)
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಹೋಶೇ 6 : 4 (KNV)
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ಹೋಶೇ 6 : 5 (KNV)
ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ಹೋಶೇ 6 : 6 (KNV)
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ಹೋಶೇ 6 : 7 (KNV)
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ಹೋಶೇ 6 : 8 (KNV)
ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
ಹೋಶೇ 6 : 9 (KNV)
ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
ಹೋಶೇ 6 : 10 (KNV)
ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.
ಹೋಶೇ 6 : 11 (KNV)
ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
❮
❯