ಹೋಶೇ 7 : 1 (KNV)
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ಹೋಶೇ 7 : 2 (KNV)
ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
ಹೋಶೇ 7 : 3 (KNV)
ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
ಹೋಶೇ 7 : 4 (KNV)
ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
ಹೋಶೇ 7 : 5 (KNV)
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ಹೋಶೇ 7 : 6 (KNV)
ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
ಹೋಶೇ 7 : 7 (KNV)
ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
ಹೋಶೇ 7 : 8 (KNV)
ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
ಹೋಶೇ 7 : 9 (KNV)
ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
ಹೋಶೇ 7 : 10 (KNV)
ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
ಹೋಶೇ 7 : 11 (KNV)
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
ಹೋಶೇ 7 : 12 (KNV)
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
ಹೋಶೇ 7 : 13 (KNV)
ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
ಹೋಶೇ 7 : 14 (KNV)
ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
ಹೋಶೇ 7 : 15 (KNV)
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.
ಹೋಶೇ 7 : 16 (KNV)
ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
❮
❯