ಯೆಶಾಯ 23 : 1 (KNV)
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಯೆಶಾಯ 23 : 2 (KNV)
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
ಯೆಶಾಯ 23 : 3 (KNV)
ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ಯೆಶಾಯ 23 : 4 (KNV)
ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
ಯೆಶಾಯ 23 : 5 (KNV)
ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
ಯೆಶಾಯ 23 : 6 (KNV)
ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
ಯೆಶಾಯ 23 : 7 (KNV)
ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
ಯೆಶಾಯ 23 : 8 (KNV)
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಯೆಶಾಯ 23 : 9 (KNV)
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಯೆಶಾಯ 23 : 10 (KNV)
ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
ಯೆಶಾಯ 23 : 11 (KNV)
ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
ಯೆಶಾಯ 23 : 12 (KNV)
ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
ಯೆಶಾಯ 23 : 13 (KNV)
ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
ಯೆಶಾಯ 23 : 14 (KNV)
ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
ಯೆಶಾಯ 23 : 15 (KNV)
ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
ಯೆಶಾಯ 23 : 16 (KNV)
ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
ಯೆಶಾಯ 23 : 17 (KNV)
ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.
ಯೆಶಾಯ 23 : 18 (KNV)
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.

1 2 3 4 5 6 7 8 9 10 11 12 13 14 15 16 17 18