ಯೆಶಾಯ 33 : 1 (KNV)
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಯೆಶಾಯ 33 : 2 (KNV)
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ಯೆಶಾಯ 33 : 3 (KNV)
ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
ಯೆಶಾಯ 33 : 4 (KNV)
ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
ಯೆಶಾಯ 33 : 5 (KNV)
ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
ಯೆಶಾಯ 33 : 6 (KNV)
ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
ಯೆಶಾಯ 33 : 7 (KNV)
ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
ಯೆಶಾಯ 33 : 8 (KNV)
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
ಯೆಶಾಯ 33 : 9 (KNV)
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
ಯೆಶಾಯ 33 : 10 (KNV)
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಯೆಶಾಯ 33 : 11 (KNV)
ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
ಯೆಶಾಯ 33 : 12 (KNV)
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
ಯೆಶಾಯ 33 : 13 (KNV)
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
ಯೆಶಾಯ 33 : 14 (KNV)
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಯೆಶಾಯ 33 : 15 (KNV)
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಯೆಶಾಯ 33 : 16 (KNV)
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಯೆಶಾಯ 33 : 17 (KNV)
ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
ಯೆಶಾಯ 33 : 18 (KNV)
ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
ಯೆಶಾಯ 33 : 19 (KNV)
ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
ಯೆಶಾಯ 33 : 20 (KNV)
ನಮ್ಮ ಹಬ್ಬಗಳು ನಡೆಯುವ ಚೀಯೋನ್‌ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್‌ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
ಯೆಶಾಯ 33 : 21 (KNV)
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ಯೆಶಾಯ 33 : 22 (KNV)
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಯೆಶಾಯ 33 : 23 (KNV)
ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
ಯೆಶಾಯ 33 : 24 (KNV)
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: