ಯೆಶಾಯ 44 : 1 (KNV)
ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ಯೆಶಾಯ 44 : 2 (KNV)
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ಯೆಶಾಯ 44 : 3 (KNV)
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಯೆಶಾಯ 44 : 4 (KNV)
ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
ಯೆಶಾಯ 44 : 5 (KNV)
ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
ಯೆಶಾಯ 44 : 6 (KNV)
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಯೆಶಾಯ 44 : 7 (KNV)
ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
ಯೆಶಾಯ 44 : 8 (KNV)
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ಯೆಶಾಯ 44 : 9 (KNV)
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಯೆಶಾಯ 44 : 10 (KNV)
ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
ಯೆಶಾಯ 44 : 11 (KNV)
ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
ಯೆಶಾಯ 44 : 12 (KNV)
ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ಯೆಶಾಯ 44 : 13 (KNV)
ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
ಯೆಶಾಯ 44 : 14 (KNV)
ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.
ಯೆಶಾಯ 44 : 15 (KNV)
ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
ಯೆಶಾಯ 44 : 16 (KNV)
ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
ಯೆಶಾಯ 44 : 17 (KNV)
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಯೆಶಾಯ 44 : 18 (KNV)
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಯೆಶಾಯ 44 : 19 (KNV)
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
ಯೆಶಾಯ 44 : 20 (KNV)
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಯೆಶಾಯ 44 : 21 (KNV)
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
ಯೆಶಾಯ 44 : 22 (KNV)
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಯೆಶಾಯ 44 : 23 (KNV)
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಯೆಶಾಯ 44 : 24 (KNV)
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ಯೆಶಾಯ 44 : 25 (KNV)
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಯೆಶಾಯ 44 : 26 (KNV)
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ಯೆಶಾಯ 44 : 27 (KNV)
ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ
ಯೆಶಾಯ 44 : 28 (KNV)
ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
❮
❯