ಯೆಶಾಯ 47 : 1 (KNV)
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ಯೆಶಾಯ 47 : 2 (KNV)
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
ಯೆಶಾಯ 47 : 3 (KNV)
ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
ಯೆಶಾಯ 47 : 4 (KNV)
ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
ಯೆಶಾಯ 47 : 5 (KNV)
ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
ಯೆಶಾಯ 47 : 6 (KNV)
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಯೆಶಾಯ 47 : 7 (KNV)
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ಯೆಶಾಯ 47 : 8 (KNV)
ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
ಯೆಶಾಯ 47 : 9 (KNV)
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
ಯೆಶಾಯ 47 : 10 (KNV)
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
ಯೆಶಾಯ 47 : 11 (KNV)
ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
ಯೆಶಾಯ 47 : 12 (KNV)
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಯೆಶಾಯ 47 : 13 (KNV)
ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
ಯೆಶಾಯ 47 : 14 (KNV)
ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.
ಯೆಶಾಯ 47 : 15 (KNV)
ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

1 2 3 4 5 6 7 8 9 10 11 12 13 14 15