ಯೆಶಾಯ 8 : 1 (KNV)
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ಯೆಶಾಯ 8 : 2 (KNV)
ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
ಯೆಶಾಯ 8 : 3 (KNV)
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
ಯೆಶಾಯ 8 : 4 (KNV)
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಯೆಶಾಯ 8 : 5 (KNV)
ಕರ್ತನು ಮತ್ತೊಂದಾವರ್ತಿ ನನಗೆ--
ಯೆಶಾಯ 8 : 6 (KNV)
ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
ಯೆಶಾಯ 8 : 7 (KNV)
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಯೆಶಾಯ 8 : 8 (KNV)
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಯೆಶಾಯ 8 : 9 (KNV)
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಯೆಶಾಯ 8 : 10 (KNV)
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ಯೆಶಾಯ 8 : 11 (KNV)
ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
ಯೆಶಾಯ 8 : 12 (KNV)
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ಯೆಶಾಯ 8 : 13 (KNV)
ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
ಯೆಶಾಯ 8 : 14 (KNV)
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಯೆಶಾಯ 8 : 15 (KNV)
ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
ಯೆಶಾಯ 8 : 16 (KNV)
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ಯೆಶಾಯ 8 : 17 (KNV)
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಯೆಶಾಯ 8 : 18 (KNV)
ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ಯೆಶಾಯ 8 : 19 (KNV)
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ಯೆಶಾಯ 8 : 20 (KNV)
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಯೆಶಾಯ 8 : 21 (KNV)
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
ಯೆಶಾಯ 8 : 22 (KNV)
ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು
❮
❯