ಯಾಕೋಬನು 1 : 1 (KNV)
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
ಯಾಕೋಬನು 1 : 2 (KNV)
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ಯಾಕೋಬನು 1 : 3 (KNV)
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಯಾಕೋಬನು 1 : 4 (KNV)
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ಯಾಕೋಬನು 1 : 5 (KNV)
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ಯಾಕೋಬನು 1 : 6 (KNV)
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ಯಾಕೋಬನು 1 : 7 (KNV)
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
ಯಾಕೋಬನು 1 : 8 (KNV)
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
ಯಾಕೋಬನು 1 : 9 (KNV)
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ಯಾಕೋಬನು 1 : 10 (KNV)
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
ಯಾಕೋಬನು 1 : 11 (KNV)
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
ಯಾಕೋಬನು 1 : 12 (KNV)
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ಯಾಕೋಬನು 1 : 13 (KNV)
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
ಯಾಕೋಬನು 1 : 14 (KNV)
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಯಾಕೋಬನು 1 : 15 (KNV)
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
ಯಾಕೋಬನು 1 : 16 (KNV)
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
ಯಾಕೋಬನು 1 : 17 (KNV)
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಯಾಕೋಬನು 1 : 18 (KNV)
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಯಾಕೋಬನು 1 : 19 (KNV)
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಯಾಕೋಬನು 1 : 20 (KNV)
ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
ಯಾಕೋಬನು 1 : 21 (KNV)
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ಯಾಕೋಬನು 1 : 22 (KNV)
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ಯಾಕೋಬನು 1 : 23 (KNV)
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
ಯಾಕೋಬನು 1 : 24 (KNV)
ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
ಯಾಕೋಬನು 1 : 25 (KNV)
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
ಯಾಕೋಬನು 1 : 26 (KNV)
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.
ಯಾಕೋಬನು 1 : 27 (KNV)
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
❮
❯